ಬೆಂಗಳೂರು : ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಘರ್ಷಣೆಯ ನಂತರ ಹೆಚ್ಚುತ್ತಿರುವ ಭದ್ರತಾ ಕಳವಳಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಇದೀಗ ಮಾಹಿತಿ ಲಭ್ಯವಾಗಿದೆ.
ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಸುರಕ್ಷತಾ ಕಾರಣಗಳಿಂದ ರದ್ದುಗೊಳಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.