ಬೆಳಗಾವಿ :
ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿದ್ದ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಯವರಿಗೆ ಕೊನೆಗೂ ಶುಭ ಸುದ್ದಿ ಲಭಿಸಿದೆ. ಅವರ ನಾಮಪತ್ರವನ್ನು ಚುನಾವಣಾ ಆಯೋಗ ಅಂಗೀಕರಿಸಿದೆ. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಅಭ್ಯರ್ಥಿಗಳು ತಕಕಾರು ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಕೊನೆಗೂ ರತ್ನಾ ಮಾಮನಿ ಅವರ ನಾಮಪತ್ರ ಅಂಗೀಕರಿಸಿದೆ.