ಬೆಂಗಳೂರು :
ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ .
ಡಿ .19 ರಿಂದ 29 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ .
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ . ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು , ವಿವಿಧ ಸಚಿವರು , ಶಾಸಕರು , ಅಧಿಕಾರಿಗಳು ಹಾಜರಿದ್ದರು . ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು , ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ .