ದೆಹಲಿ :
ಕೇಂದ್ರದ ಮಾಜಿ ಸಚಿವ ಹಾಗೂ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರಿ ಖಚಿತಪಡಿಸಿದ್ದಾರೆ.
ಬಿಹಾರದ ರಾಜಕೀಯದಲ್ಲಿ ತಮ್ಮ ವಿಶೇಷ ಪ್ರಭಾವವನ್ನು ಹೊಂದಿದ್ದ ಶರದ್ ಯಾದವ್ ಅವರ ಅಗಲಿಕೆ ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ.ಅವರ ಸಮಾಜವಾದಿ ರಾಜಕೀಯವು ಅವರನ್ನು ಸಾರ್ವಜನಿಕರಲ್ಲಿ ಜನಪ್ರಿಯಗೊಳಿಸಿತು. ಆದರೆ ಇದೀಗ ಆ ಮಹಾನ್ ನಾಯಕ ಇಹಲೋಕಕ್ಕೆ ವಿದಾಯ ಹೇಳಿದ್ದಾರೆ. ಅವರು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.
ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ತಮ್ಮ ತಂದೆಯ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ತಂದೆ ಇನ್ನಿಲ್ಲ ಎಂದು ಬರೆದುಕೊಂಡಿದ್ದಾರೆ.