ದೆಹಲಿ :
ದೇಶಾದ್ಯಂತ ಸಂಚಲನಕ್ಕೆ ಕಾರಣವಾದ ಹಿಜಾಬ್ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾಯಿಸಲಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ಈ ತೀರ್ಮಾನ ಕೈಗೊಂಡಿದೆ. ಹಿಜಾಬ್ ವಿಚಾರದಲ್ಲಿ ಇಬ್ಬರು ನ್ಯಾಯಮೂರ್ತಿಗಳಲ್ಲಿ ಭಿನ್ನತೆ ಕಂಡುಬಂದಿದೆ. ಹೇಮಂತ್ ಗುಪ್ತಾ ಮುಸ್ಲಿಮ್ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಸುಧಾಂಶು ಅವರು ಆದೇಶವನ್ನು ವಜಾ ಮಾಡಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆಗಸ್ಟ್ 5 ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 22ರಂದು ನೀಡಿದ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು. ಇದೀಗ ಹತ್ತು ದಿನಗಳ ವಿಚಾರಣೆ ಬಳಿಕ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳನ್ನು
ಧರಿಸುವುದು ಸರಿಯಲ್ಲ ಎಂದು ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟ್ ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.