ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ RTO ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಆಗಾಗ ಕೇಳಿ ಬರುತ್ತಿದೆ. ಈ ಬಗ್ಗೆಯೂ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತ ರಾಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.