ನವ ದೆಹಲಿ : ಎನ್ ಡಿ ಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಎನ್ಡಿಎ ಮೈತ್ರಿಕೂಟ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕಣಕ್ಕಿಳಿಸಿತ್ತು. ಅವರು ಇದೀಗ ಜಯಭೇರಿ ಗಳಿಸಿದ್ದು ದೇಶದ ಮುಂದಿನ ಉಪ ರಾಷ್ಟ್ರಪತಿ ಆಗಲಿದ್ದಾರೆ. ವಿಪಕ್ಷ ಮೈತ್ರಿಕೂಟ ಇಂಡಿಯಾ ಬಣ ಸುಪ್ರೀಂ ಕೋರ್ಟ್ ನಿವೃತ್ತಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದಾರೆ.
ಚುನಾವಣೆ ಪ್ರಕ್ರಿಯೆಯಲ್ಲಿ ಎನ್ಡಿಎ ಅಭ್ಯರ್ಥಿ, ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ಯಗಳ ಮತದಿಂದ ಜಯ ಸಾಧಿಸಿ, ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ 300 ಮೊದಲ ಪ್ರಾಶಸ್ತ್ಯಗಳ ಮತಗಳ ಪಡೆದಿದ್ದಾರೆ.
BREAKING ಎನ್ ಡಿಎ ಅಭ್ಯರ್ಥಿ ಜಯಭೇರಿ : ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆ
