This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

BREAKING ರಾಜ್ಯೋತ್ಸವ ಪ್ರಶಸ್ತಿ ಘೋಷಣೆ BREAKING Rajyotsava Award Announcement


ಜನಜೀವಾಳ ಜಾಲ ಬೆಂಗಳೂರು :ಕರ್ನಾಟಕ ಸರ್ಕಾರ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಘೋಷಣೆ ಮಾಡಿದೆ.

ರಾಮಕೃಷ್ಣ ಮರಾಠೆ,ಚಚಡಿ ಮತ್ತು ಅಶೋಕ
ನೀಲಗಾರ(ಸಾಹಿತ್ಯ), ಹನುಮಂತಪ್ಪ ಹುಕ್ಕೇರಿ (ಶಿಲ್ಪಕಲೆ), ರಾಘವೇಂದ್ರ ಅಣ್ವೇಕರ್ (ಕ್ರೀಡೆ) ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

67 ಸಾಧಕರಿಗೆ ಪ್ರಶಸ್ತಿ ಗರಿ :2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 67 ಜನರ ಪಟ್ಟಿ ಈ ಕೆಳಗಿನಂತಿದೆ

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಕೆಲಸ ಮಾಡಿದ ರಾಮನಗರದ ಸಾಲುಮರದ ನಿಂಗಣ್ಣ, ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಕಿರುತೆರೆ ನಟ ಸಿಹಿಕಹಿ ಚಂದ್ರು, ಪೌರ ಸೇನಾನಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಯಕ್ಷಗಾನ : ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಅರ್ಥಧಾರಿ ಡಾ. ಎಂ.ಪ್ರಭಾಕರ ಜೋಷಿ (ಉಡುಪಿ), ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(ಉತ್ತರ ಕನ್ನಡ), ತೆಂಕು ತಿಟ್ಟಿನ ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ(ದಕ್ಷಿಣ ಕನ್ನಡ), ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ಎಂ. ಎ. ನಾಯ್ಕ್ (ಉಡುಪಿ) ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.

ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


Jana Jeevala
the authorJana Jeevala

Leave a Reply