‘ಹಿಂದೂ’ ಶಬ್ದ ಅಶ್ಲೀಲತೆಯಿಂದ ಕೂಡಿದೆ ಎಂದು ಸತೀಶ ಜಾರಕಿಹೊಳಿ ಹೇಳಿದ್ದರು. ಈ ಬಗ್ಗೆ ಪರ್ಷಿಯನ್ ಭಾಷೆಯಲ್ಲಿ ಉಲ್ಲೇಖ ಇದೆ ಎಂದು ತಿಳಿಸಿದರು. ಜತೆಗೆ ಹಿಂದೂ ಧರ್ಮದ ಬಗ್ಗೆ ಇತರ ಶಬ್ದಗಳಲ್ಲಿ ಕಟು ಟೀಕೆ ಮಾಡಿದ್ದರು. ಇದು ರಾಜ್ಯಾದ್ಯಂತ ಮಾತ್ರವಲ್ಲ ದೇಶದಲ್ಲಿ ಸತೀಶ ಜಾರಕಿಹೊಳಿ ಹಾಗೂ ಅವರು ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಟೀಕೆಗೆ ಗುರಿಯಾಗಿತ್ತು. ಬಿಜೆಪಿ ಇಡೀ ರಾಜ್ಯಾದ್ಯಂತ ಇಂದು ಸತೀಶ ಜಾರಕಿಹೊಳಿ ಹೇಳಿಕೆ ಖಂಡಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ಸ್ವಪಕ್ಷೀಯರೇ ಸತೀಶ ಜಾರಕಿಹೊಳಿಯವರ ನೆರವಿಗೆ ಬಾರದೆ ಖಂಡನೆ ವ್ಯಕ್ತಪಡಿಸಿದ್ದರು. ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದರಿಂದ ಭಾರಿ ಹಾನಿ ಕಾಂಗ್ರೆಸ್ ಪಕ್ಷಕ್ಕೆ ಆಗುವ ಸಾಧ್ಯತೆಯಿತ್ತು. ಕೊನೆಗೂ ಸತೀಶ ಜಾರಕಿಹೊಳಿ
ತಾವು ನೀಡಿದ ಹೇಳಿಕೆಯನ್ನು ಹಿಂಪಡೆಯುವುದಾಗಿ ಸ್ಪಷ್ಟೀಕರಣ ನೀಡುವ ಮೂಲಕ ಇಡೀ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಬೆಳಗಾವಿ :
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರು ಹಿಂದೂ ಶಬ್ದ ಅಶ್ಲೀಲತೆಯಿಂದ ಕೂಡಿದೆ ಎಂದು ಹೇಳಿದ್ದಾರೆ. ಇದು ಇಡೀ ರಾಷ್ಟ್ರದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಕೊನೆಗೂ ಸತೀಶ ಜಾರಕಿಹೊಳಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸ್ಪಷ್ಟೀಕರಣದ ಪೂರ್ಣ ವಿವರ ಇಲ್ಲಿದೆ :
ದಿನಾಂಕ : 06-11-2022 ರಂದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯ ಪ್ರಸ್ತಾಪಿಸಿದೆ . ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ . ಇದು ಭಾರತ ದೇಶಕ್ಕೆ ಹೇಗೆ ಬಂತು ? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿದೆ ಅಂತಾ ಹೇಳುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆಯಾಗಬೇಕಿರುವುದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳುತ್ತೇನೆ .
ಇದನ್ನು ನಾನು ವಿಕಿಪಿಡಿಯಾ , ಪುಸ್ತಕಗಳು , ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿದೆ.
ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ.
ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸಲು ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ , ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸುತ್ತೇನೆ.
ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ , ಬಸವ , ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಒಂದು ಮಾತು ವಿವಾದಕ್ಕೀಡಾಗಿದೆ . ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ , ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ . ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಲಿಲ್ಲ ವಿಷಾದಿಸುತ್ತೇನೆ.