ಹರಾರೆ: ಟಿ20 ವಿಶ್ವಕಪ್ ಚಾಂಪಿಯನ್ ಭಾರತ ಕ್ರಿಕೆಟ್ ತಂಡ ಇದೀಗ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ತನ್ನ ಪಾರಮ್ಯವನ್ನು ಮೆರೆದಿದೆ.
ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೋಲು ಅನುಭವಿಸಿದ್ದ ಭಾರತದ ಯುವ ಪಡೆ ನಂತರದ ನಾಲ್ಕು ಪಂದ್ಯಗಳಲ್ಲಿ ದಿಗ್ವಿಜಯ ಸಾಧಿಸಿದೆ. ಇಂದು ನಡೆದ ಅಂತಿಮ ಪಂದ್ಯದಲ್ಲಿ ಭಾರತ 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಸಂಜು 58, ದುಬೆ 26, ಪರಾಗ್ 22 ರನ್ ಗಳಿಸಿದರು.
ಆದರೆ ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಜಿಂಬಾಬ್ವೆ ಯಾವ ವಿಧದಲ್ಲೂ ಭಾರತಕ್ಕೆ ಪೈಪೋಟಿ ನೀಡುವಲ್ಲಿ ಸಾಧ್ಯವಾಗಲಿಲ್ಲ. ಜಿಂಬಾಬ್ವೆ ಕ್ರಿಕೆಟ್ ತಂಡ 20 ಓವರ್ಗಳಲ್ಲಿ ಕೇವಲ ರನ್ ಗಳಿಸಿ ಸೋಲು ಅನುಭವಿಸಿತು. ಭಾರತದ ಪರವಾಗಿ ಮುಕೇಶ್ ಕುಮಾರ್ ನಾಲ್ಕು ವಿಕೆಟ್ ಪಡೆದುಕೊಳ್ಳುವ ಮೂಲಕ ಜಿಂಬಾಬ್ವೆಗೆ ಆಘಾತ ನೀಡಿದರು. ಅಂತಿಮವಾಗಿ ಜಿಂಬಾಬ್ವೆ ತಂಡ 18.3 ಓವರ್ ಗಳಲ್ಲಿ ಕೇವಲ 125 ಗಳಿಸಿ ಆಲೌಟ್ ಆಗಿದೆ. ಭಾರತ 42 ರನ್ಗಳ ಭರ್ಜರಿ ಜಯ ಸಾಧಿಸಿದೆ.