ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ 19 ಮತ್ತು 20ರಂದು ಅಂದರೆ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಖಾನಾಪುರ ತಾಲೂಕಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಇದರಿಂದ ನದಿ-ನಾಲೆಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಮಳೆಯಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಹರಸಾಹಸ ಪಡುವಂತಾಗಿದೆ. ಈ ಬಗ್ಗೆ ಶಾಸಕ ವಿಠಲ ಹಲಗೇಕರ ಮತ್ತು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ್ ಕೊಚೇರಿ ಅವರು ಖಾನಾಪುರ ತಾಲೂಕಿನ ಶಿಕ್ಷಣಾಧಿಕಾರಿ ರಾಜಶ್ರೀ ಕುಡಚಿ ಅವರಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಅದರಂತೆ ಶಿಕ್ಷಣಾಧಿಕಾರಿಗಳು ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಖಾನಾಪುರ ತಾಲೂಕಿನ ಸಮಸ್ಯೆ ವಿವರಿಸಿದ್ದರು. ಈ ಹಿನ್ನಲೆಯಲ್ಲಿ ಸುರಿಯುತ್ತಿರುವ ಮಳೆ ಪರಿಸ್ಥಿತಿ ಪರಿಗಣಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರಜೆ ಘೋಷಣೆ ಮಾಡಿದ್ದಾರೆ.
BREAKING ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ
