ಬೆಂಗಳೂರು :
ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರಿಗೆ ಬಡ್ತಿ ನೀಡಲು ಶಿಫಾರಸು ಮಾಡಿತ್ತು.
ಬಾಂಬೆ ಹೈಕೋರ್ಟಿನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ಜಸ್ಟಿಸ್ ವರಾಲೆ ಅವರು ಆಗಸ್ಟ್ 1985 ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು, ತಮ್ಮ ಆರಂಭಿಕ ವರ್ಷಗಳಲ್ಲಿ ವಕೀಲ ಎಸ್ಎನ್ ಲೋಯಾ ಅವರ ಬಳಿ ಅಭ್ಯಾಸ ಮಾಡಿದರು. ಅವರು 1992 ರವರೆಗೆ ಔರಂಗಾಬಾದ್ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.
ಅವರು ಜುಲೈ 18, 2008 ರಂದು ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡರು.
ನ್ಯಾಯಮೂರ್ತಿ ವರಾಲೆ ಅವರು ಬಾಂಬೆ ಹೈಕೋರ್ಟ್ನಿಂದ ಕರ್ನಾಟಕದಲ್ಲಿ ಮುಖ್ಯ ನ್ಯಾಯಮೂರ್ತಿಯಾಗುತ್ತಿರುವ ನಾಲ್ಕನೇ ನ್ಯಾಯಾಧೀಶರಾಗಿದ್ದಾರೆ.