ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಈ ಸಲ 26 ನೇ ಸ್ಥಾನ ಪಡೆದುಕೊಂಡಿವೆ.
ಬೆಂಗಳೂರು :
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ.
ಫಲಿತಾಂಶ ಸೋಮವಾರ (ಮೇ 8) ಪ್ರಕಟವಾಗಿದ್ದು, ಶೇಕಡಾ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KARNATAKA SCHOOL EXAMINATION AND ASSESSMENT BOARD- KSEAB) ಪ್ರಕಟಣೆಯಲ್ಲಿ ತಿಳಿಸಿದೆ. ಇಂದು 11 ಗಂಟೆಯ ನಂತರ ಫಲಿತಾಂಶ ಜಾಲಾತಾಣದಲ್ಲಿ ಲಭ್ಯವಾಗಲಿದೆ. www.karresults.nic.in ಅಥವಾ ಲಭ್ಯವಾಗಲಿದೆ. ಕರ್ನಾಟಕ SSLC ಬೋರ್ಡ್ ಪರೀಕ್ಷೆಯಲ್ಲಿ ಈ ಬಾರಿ ಒಟ್ಟು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮನಾಥ್ ಮಾತನಾಡಿ, ಶೇಕಡಾ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ 8,35,102 ಜನ ವಿದ್ಯಾರ್ಥಿಗಳ ಹಾಜರು ಆಗಿದ್ದರು. 7,00,619 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ: ಗ್ರಾಮೀಣ ಭಾಗದಲ್ಲಿ ಶೇ.87 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಮಕ್ಕಳಿಗಿಂತ ಗ್ರಾಮೀಣ ಪ್ರದೇಶದಲ್ಲಿನ ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಶೇ.87 ಹಾಗೂ ನಗರ ಪ್ರದೇಶದಲ್ಲಿ ಶೇ.79 ಫಲಿತಾಂಶ ಸಿಕ್ಕಿದೆ. ಸರ್ಕಾರಿ ಶಾಲೆಗಳಲ್ಲಿ ಶೇಕಡ 86.74 ಉತ್ತಮ ಫಲಿತಾಂಶ ಲಭ್ಯವಾಗಿದೆ. ಅನುದಾನ ರಹಿತ ಶಾಲೆಗಳಲ್ಲಿ ಶೇ.90.89 ಫಲಿತಾಂಶ ಲಭ್ಯವಾಘಿದೆ. ಅನುದಾನಿತ ಶಾಲೆಯಲ್ಲಿ 85.64% ಫಲಿತಾಂಶ ಸಿಕ್ಕಿದೆ. ಕನ್ನಡದಲ್ಲಿ 14,983 ವಿದ್ಯಾರ್ಥಿಗಳು 125 ಅಂಕ ಪಡೆದಿದ್ದಾರೆ.
ನಾಲ್ಕು ವಿದ್ಯಾರ್ಥಿಗಳು ಶೇ.100 ಫಲಿತಾಂಶ: ನಾಲ್ಕು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ. 61,003 ವಿದ್ಯಾರ್ಥಿಗಳು ಶೇ.90ರಿಂದ 100 ಶೇಕಾಡವಾರು ಅಂಕ ಪಡೆದಿದ್ದಾರೆ. 1,517 ಸರ್ಕಾರಿ ಶಾಲೆಗಳು 100ಕ್ಕೆ 100 ರಿಸರ್ಲ್ಟ್ ಪಡೆದಿದ್ದಾರೆ. ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಇಲ್ಲ. ಆದರೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಸೇರಿ ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶವಾಗಿದೆ.
ಚಿತ್ರದುರ್ಗ ಪ್ರಥಮ, ಯಾದಗಿರಿ ಕೊನೆಯ ಸ್ಥಾನ: ಚಿತ್ರದುರ್ಗ ಜಿಲ್ಲೆ ಹೆಚ್ಚಿನ ಫಲಿತಾಂಶ ಲಭ್ಯವಾಗಿದ್ದು, ಶೇ.96 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ.
ಮಂಡ್ಯ ಜಿಲ್ಲೆಯು ಶೇಕಡಾ 96.74 ಫಲಿತಾಂಶ ಪಡೆದಿದ್ದು, 2ನೇ ಸ್ಥಾನ ಪಡೆದಿದೆ.
ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:
ಪರೀಕ್ಷಾ ಫಲಿತಾಂಶ ನೋಡಲು ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾಹಿತಿ ಇಲ್ಲಿದೆ.
ಅಧಿಕೃತ ವೆಬ್ಸೈಟ್ www.karresults.nic.in ಗೆ ಭೇಟಿ
ಮುಖಪುಟದಲ್ಲಿ ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಒತ್ತಿರಿ
ತೆರೆಯುವ ಹೊಸ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿಟ್ಟುಕೊಳ್ಳಬಹುದು.
ಪರೀಕ್ಷೆ ಬರೆದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ
ಈ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ 83.89 ವಿದ್ಯಾರ್ಥಿನಿಯರು, ಶೇ 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಚಿತ್ರದುರ್ಗ ಪ್ರಥಮ ಸ್ಥಾನ, ಮಂಡ್ಯ 2ನೇ, ಹಾಸನ 3ನೇ ಸ್ಥಾನ ಗಳಿಸಿವೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಚಿತ್ರದುರ್ಗಕ್ಕೆ ಶೇ. 96.80, ಮಂಡ್ಯ ಜಿಲ್ಲೆಗೆ ಶೇ. 96.74ರಷ್ಟು ಫಲಿತಾಂಶ ಬಂದಿದೆ. ಕೊನೆಯ ಸ್ಥಾನ ಗಳಿಸಿರುವ ಯಾದಗಿರಿ ಜಿಲ್ಲೆಯಲ್ಲಿ ಶೇ.75.49ರಷ್ಟು ಫಲಿತಾಂಶ ಬಂದಿದೆ.
ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
* ಭೂಮಿಕಾ ಪೈ: ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು
* ಭೀಮನಗೌಡ ಪಾಟೀಲ್: ಮುದ್ದೇಬಿಹಾಳ, ವಿಜಯಪುರ
* ಅನುಪಮಾ ಶ್ರೀಶೈಲ್ ಹಿರೆಹೊಳಿ: ಶ್ರೀ ಕುಮಾರೇಶ್ವರ ಶಾಲೆ, ಸವದತ್ತಿ, ಬೆಳಗಾವಿ
* ಯಶಸ್ ಗೌಡ: ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ