ಹುಬ್ಬಳ್ಳಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ಮಂಗಳವಾರ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರಿಂದ ಧರಣಿ ಸತ್ಯಾಗ್ರಹವಿದ್ದರೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಎಂದಿನಂತೆ ಬಸ್ಸುಗಳು ಕಾರ್ಯಾಚರಣೆಯಾಗಲಿವೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು ಎಂದಿನಂತೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.