ಬೆಂಗಳೂರು :ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಪಾಲಿಗೆ ಮುಖ್ಯಮಂತ್ರಿ ಹುದ್ದೆ ಗಗನಕುಸುಮವಾಗಿದೆ.
ಇದುವರೆಗೆ ಬೆಳಗಾವಿ ಜಿಲ್ಲೆಯವರು ಯಾರೊಬ್ಬರೂ ರಾಜ್ಯದ ಮುಖ್ಯಮಂತ್ರಿ ಪದವಿಗೆ ಏರಿಲ್ಲ.
ಆದರೆ, 2028 ರಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ ಬೆಳಗಾವಿ ಜಿಲ್ಲೆಗೆ ಚೊಚ್ಚಲ ಬಾರಿಗೆ ಮುಖ್ಯಮಂತ್ರಿ ಪದವಿ ಒಲಿದು ಬರುವ ಸಾಧ್ಯತೆ ಇದೆ. ಇಷ್ಟಕ್ಕೂ ಬೆಳಗಾವಿ ಜಿಲ್ಲೆಯಿಂದ ಮುಖ್ಯಮಂತ್ರಿ ಆಗಲಿರುವ ನಾಯಕರು ಯಾರು ಎಂಬ ಪ್ರಶ್ನೆ ಮೂಡುತ್ತದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.
ರಾಜ್ಯದ ಪ್ರಭಾವಿ ಜನನಾಯಕ ಹಾಗೂ ರಾಜಕೀಯದ ಮಾಸ್ಟರ್ ಮೈಂಡ್ ಎಂದೇ ಖ್ಯಾತರಾಗಿರುವ ಯಮಕನಮರಡಿ ವಿಧಾನಸಭಾ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸತೀಶ ಜಾರಕಿಹೊಳಿ ಅವರು 2028 ರ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಪದವಿಯ ಪ್ರಮುಖ ಹಕ್ಕುದಾರರಾಗಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸ್ವತಃ ಸತೀಶ ಜಾರಕಿಹೊಳಿ ಅವರೇ ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಹಿಂದೆಯೂ ಸ್ವತಃ ಸತೀಶ ಜಾರಕಿಹೊಳಿ ಅವರು 2028 ರಲ್ಲಿ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ್ದರು. ಈಗ ಮತ್ತೊಮ್ಮೆತಮ್ಮ ಮನದಿಂಗಿತ ಹೇಳಿಕೊಂಡಿದ್ದಾರೆ. ಎಲ್ಲದಕ್ಕೂ ಈಗ ಕಾಲವೇ ಉತ್ತರ ನೀಡಬೇಕು.