ಬೆಂಗಳೂರು :
ಶಾಸಕರಿಬ್ಬರ ನಿಧನದಿಂದ ತೆರವಾಗಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಸವದತ್ತಿ ಮತಕ್ಷೇತ್ರಗಳಿಗೆ ಉಪಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.
ಸಚಿವರಾಗಿದ್ದ ಹುಕ್ಕೇರಿ ಮತಕ್ಷೇತ್ರದ ಉಮೇಶ ಕತ್ತಿ ಮತ್ತು ವಿಧಾನಸಭೆಯ ಉಪಾಧ್ಯಕ್ಷರಾಗಿದ್ದ ಸವದತ್ತಿಯ ಆನಂದ ಮಾಮನಿ ಅವರು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿರುವ ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಿತ್ತು. ಆದರೆ, ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿವೆ. ಈ ಹಿನ್ನೆಲೆಯಲ್ಲಿ ಇವೆರಡು ಕ್ಷೇತ್ರಗಳಿಗೆ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ ಎನ್ನಲಾಗಿದೆ.
ಉಮೇಶ ಕತ್ತಿ ಹಾಗೂ ಆನಂದ ಮಾಮನಿ ಅವರು ಬಿಜೆಪಿಯಿಂದ ಆಯ್ಕೆಯಾಗಿದ್ದರು.