ಬೆಳಗಾವಿ
ದಿನಾಂಕ : 17 ಮತ್ತು 18 (ಮಾ) ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಗಳ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶಗಳ ಸಹಯೋಗದೊಂದಿಗೆ ಮಹಾವಿದ್ಯಾಲಯದಲ್ಲಿ ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆಯ ಅಂಗ ಸಂಸ್ಥೆಯಾದ ಟಿಸಿಎಸ್ ಕ್ಯಾಂಪಸ್ ನೇಮಕಾತಿ ಡ್ರೈವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ಯಾಂಪಸ್ ನೇಮಕಾತಿ ಡ್ರೈವ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಮಹಾವಿದ್ಯಾಲಯದ 530 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎರಡು ದಿನಗಳ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ 96 ವಿದ್ಯಾರ್ಥಿಗಳು ಟಿ. ಸಿ. ಎಸ್. ಸಾಫ್ಟವೇರ್ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವರಾದ ಪ್ರೊ. ಶಿವಾನಂದ ಗೊರನಾಳೆ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್ ಎಸ್ ತೇರದಾಳ, ವಿಶ್ವವಿದ್ಯಾಲಯದ ವಿದ್ಯಾರ್ಥಿ ಉದ್ಯೋಗ ಕೋಶದ ಅಧಿಕಾರಿ ಪ್ರೊ. ಆರ್ ಎನ್ ಮನಗೂಳಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿ ಉದ್ಯೋಗ ಕೋಶದ ಅಧಿಕಾರಿ ಡಾ. ಮುಕುಂದ ಮುಂಡರಗಿ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.