ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಲಾದ ಕಾಲ್ಪನಿಕ, ಸುಳ್ಳು ಮಾಹಿತಿ ಯನ್ನೊಳಗೊಂಡ ವಿಡಿಯೊವನ್ನು ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರ ಮಾಡಿ, ಸಾರ್ವಜನಿಕರು ಪ್ರಚೋದನೆ ಗೊಳ್ಳುವಂತೆ ಮಾಡಿದ ಕಾರಣಕ್ಕಾಗಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಇತರೆ ಮಾಹಿತಿಯನ್ನೊಳಗೊಂಡ, ಕಾಲ್ಪನಿಕವಾಗಿ ಸೃಷ್ಟಿಸಲಾದ ಸುಳ್ಳು ಮಾಹಿತಿಯ ವಿಡಿಯೊವನ್ನೂ ಈತ ಪ್ರಸಾರ ಮಾಡಿದ್ದು, ಈ ಕಾರಣಕ್ಕಾಗಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.