ನವದೆಹಲಿ: ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.
ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಆಯ್ಕೆ ಸಮಿತಿಯಲ್ಲಿ ಇದ್ದರು.
2025ರ ಸಾಲಿನ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ 2025 ಜನವರಿ 30ರಂದು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಈ ಪ್ರತಿಷ್ಠಿತ ಪ್ರಶಸ್ತಿಯು ₹1,00,000 ನಗದು ಬಹುಮಾನ, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.


