ಬೆಳಗಾವಿ :
ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಮುಗಿಸಿಕೊಂಡು ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿಯ ಖಾಸಗಿ ಹೋಟೆಲಿಗೆ ಆಗಮಿಸಿದ್ದಾರೆ. ಅವರು ಬಿಜೆಪಿ ನಾಯಕರ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಘಟಾನುಘಟಿ ನಾಯಕರು ಬೆಳಗಾವಿಯಲ್ಲಿದ್ದಾರೆ. ಬಿಜೆಪಿ ಜಿಲ್ಲಾ ಬಿಜೆಪಿ ಮುಖಂಡರ ಜೊತೆ ಕೇಂದ್ರ ಸಚಿವ ಅಮಿತ್ ಷಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದೀಗ ಜಿಲ್ಲೆಯ ಸಂಸದರು, ಶಾಸಕರು, ಹಾಲಿ- ಮಾಜಿ ಸಚಿವರು ಹಾಗೂ ನಾಯಕರು ಹೋಟೆಲ್ ಗೆ ಆಗಮಿಸಿದ್ದಾರೆ.