ಚನ್ನರಾಜ್, ಲಖನ್ ಯಾವಾಗ ಪ್ರಮಾಣವಚನ ಸ್ವೀಕರಿಸ್ತಾರೆ ಗೊತ್ತಾ ?


 

ಬೆಂಗಳೂರು :
ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ನೂತನ ಸದಸ್ಯರ ಪ್ರಮಾಣವಚನ ಜನವರಿ 6 ರಂದು ಬೆಳಿಗ್ಗೆ 11 ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ ಎಂದು ವಿಧಾನಪರಿಷತ್ ಉಪ ಕಾರ್ಯದರ್ಶಿ ಬಿ.ಎ. ಬಸವರಾಜು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 10 ರಂದು ರಾಜ್ಯದ 25 ವಿಧಾನಪರಿಷತ್
ಸ್ಥಾನಗಳಿಗೆ ಮತದಾನ ನಡೆದಿತ್ತು. ಡಿ. 14 ರಂದು ಮತ ಎಣಿಕೆ ನಡೆದಿತ್ತು. 12 ಕ್ಷೇತ್ರಗಳಲ್ಲಿ ಬಿಜೆಪಿ, 11 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್-ಪಕ್ಷೇತರರು ತಲಾ 1ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರು. ಬೆಳಗಾವಿ ದ್ವಿಸದಸ್ಯ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಚೊಚ್ಚಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು ಅವರು ಅಂದೇ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ.


Leave A Reply

Your email address will not be published.