ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ 13/12/2025 ಶನಿವಾರ ಮುಂಜಾನೆ10:30 ಕ್ಕೆ ಚೆನ್ನಮ್ಮ ವೃತ್ತದ ಬಳಿಯ ಕನ್ನಡ ಸಾಹಿತ್ಯ ಭವನದಲ್ಲಿ . ಸಾವಿತ್ರಿ ಬಾಬುರಾವ್ ಶಿವಪೂಜಿ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ಹಾಗೂ ದಾದಿಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಧ್ಯಕ್ಷರಾಗಿ ಸುಮಾ ಕಿತ್ತೂರ, ಉಪನ್ಯಾಸಕರಾಗಿ ಮಂಜುಳಾ ಎನ್ ಎಸ್ , ದಾನಿಗಳಾದ ಸಂಗೀತಾ ಮುರುಗೇಶ ಶಿವಪೂಜಿ ಉಪಸ್ಥಿತರಿರುತ್ತಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆಶಾ ಎಸ್. ಯಮಕನಮರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


