ಬೆಳಗಾವಿ : ನದಿಗೆ ಬೈಕ್ ಸಹಿತ ಬಿದ್ದು ನೀರು ಪಾಲಾದ ಅಲತಗಾ ಗ್ರಾಮದ ಯುವಕನ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳು ಪರಿಹಾರ ವಿತರಿಸಿದರು. ಸೋಮವಾರ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಯುವಕನ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.