ಹಿರೇಬಾಗೇವಾಡಿ :
ಬೆಳಗಾವಿ ತಾಲೂಕಿನ ರಾಜಹಂಸಗಡದಲ್ಲಿ ಮಾರ್ಚ್ 5ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸರಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಹಿರೇ ಬಾಗೇವಾಡಿಯಲ್ಲಿ ಗುರುವಾರ ಸಂಜೆ ನಡೆದ ಅಭಿಮಾನದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಶಾಸಕಿ ರಾಜಹಂಸಗಡ ಕಾರ್ಯಕ್ರಮವನ್ನು ತಮ್ಮ ಪಕ್ಷ ಹಾಗೂ ಕುಟುಂಬದ ಕಾರ್ಯಕ್ರಮ ಎಂದು ಬಿಂಬಿಸಲು ಹೊರಟಿದ್ದಾರೆ. ಅದು ಸರಕಾರಿ ಕಾರ್ಯಕ್ರಮ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಒಂದು ವೇಳೆ ಅದನ್ನು ಖಾಸಗಿ ಕಾರ್ಯಕ್ರಮ ಮಾಡಲು ಮುಂದಾದರೆ ಹಾಗೂ ಅನಾಹುತಕ್ಕೆ ಗ್ರಾಮೀಣ ಶಾಸಕರೇ ನೇರ ಕಾರಣರಾಗುತ್ತಾರೆ ಎಂದು ಅವರು ಎಚ್ಚರಿಸಿದರು.