ಬೆಂಗಳೂರು :ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
*ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ
ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.
*ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ
ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.


