ಬೆಳಗಾವಿ: ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 13 ರಂದು ಆಗಮಿಸುವ ನಿರೀಕ್ಷೆ ಇದೆ. ಈ ಬಗ್ಗೆ ಶಾಸಕ ವಿಶ್ವಾಸ ವೈದ್ಯ ಮಾಹಿತಿ ನೀಡಿದ್ದು ಮುಖ್ಯಮಂತ್ರಿಗಳು ಅಕ್ಟೋಬರ್ 13ರಂದು ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಅಧಿಕಾರಿಗಳು ದೇವಸ್ಥಾನದ ಸಮಗ್ರ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ದೇವಸ್ಥಾನದ ಅಭಿವೃದ್ಧಿ ಕುರಿತು ಅಕ್ಟೋಬರ್ 5 ರಂದು ಸಭೆ ನಡೆಸಲಾಗುತ್ತಿದೆ. ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಕುರಿತು ಚಿಂತನೆಗಳನ್ನು ಒಳಗೊಂಡ ಮಾಹಿತಿಯೊಂದಿಗೆ ಆಗಮಿಸುವಂತೆ ಅವರು ಮನವಿ ಮಾಡಿದರು.
13ರಂದು ಯಲ್ಲಮ್ಮ ದೇವಸ್ಥಾನಕ್ಕೆ ಮುಖ್ಯಮಂತ್ರಿ
