ಖಾನಾಪುರ : ಚಿಕ್ಕದಿನ್ನಕೊಪ್ಪ ಗ್ರಾಮದ ಮುಖ್ಯ ರಸ್ತೆ ಕಾಮಗಾರಿಗೆ ಇತ್ತೀಚಿಗೆ ಚಾಲನೆ ನೀಡಲಾಗಿದ್ದು ಈಗ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುತ್ತಿದೆ ಎಂದು ಶಾಸಕ ವಿಠ್ಠಲ ಹಲಗೇಕರ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹನುಮಂತ ಪಾಟೀಲ, ಶೀತಲ ಬಂಬಾಡಿ, ಮಲ್ಲಪ್ಪ ಮಾರಿಹಾಳ, ಸಹದೇವ ಬಡಗೇರ, ಚೆಂಗಪ್ಪ ನೀಲಜಕರ ಸೇರಿದಂತೆ ಅನೇಕ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಕಾಮಗಾರಿ ಗ್ರಾಮದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಯಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ಅನುಕೂಲ ಒದಗಿಸುತ್ತದೆ.


