ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆ 25 ಸಾವಿರ ರುಪಾಯಿ ನೀಡಿದ್ದಾರೆ.
ಶುಕ್ರವಾರ ನಗರದ ವಿವಿಧೆಡೆ ಪೂಜಾರಿ ಅವರು ಮತಯಾಚನೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಇಲ್ಲಿನ ತೇಗೂರು ವೃತ್ತಕ್ಕೆ ಹೋಗಿದ್ದ ಸಂದರ್ಭದಲ್ಲಿ ಚುರುಮುರಿ ವ್ಯಾಪಾರಿ ಲೋಕೇಶ್ ಅವರು ಎಲೆ, ಅಡಿಕೆ, ಬಾಳೆ ಹಣ್ಣುಗಳ ತಾಂಬೂಲದೊಂದಿಗೆ ತಟ್ಟೆಯಲ್ಲಿ 25 ಸಾವಿರ ರುಪಾಯಿ ನೀಡಿ ಗೆಲುವಿಗೆ ಶುಭಾ ಹಾರೈಸಿದರು.