ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ 2023-2024ನೇ ವರ್ಷದಲ್ಲಿ ಸುಮಾರು 90 ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ನಡೆದಿದೆ, ಈ ಬಗ್ಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ನಿರ್ಭಯ ಘಟಕದಲ್ಲಿ ವರದಿಯಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮಂಗಳವಾರದಂದು ಭೇಟಿ ನೀಡಿದ ನಂತರ ಅವರು, ಪತ್ರಕರ್ತರ ಜೊತೆ ಮಾತನಾಡಿದರು. ಅತ್ಯಾಚಾರ ಪ್ರಕರಣಗಳ ಬೆಳಕಿಗೆ ಬಂದ ಸಂಖ್ಯೆ ಇದಾಗಿದೆ. ಇನ್ನು ಕೆಲವು ಪ್ರಕರಣಗಳು ಬೆಳಕಿಗೆ ಬಾರದೆ ಇರಬಹುದು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.