This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ Establishment of Karnataka's First Environmental University at Shirsi: CM Bommai Announces


ಶಿರಸಿ:
ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. ಇವುಗಳನ್ನು ವಿಲೀನಗೊಳಿಸಿ ವನ್ಯಜೀವಿ ರಕ್ಷಣೆ, ಪರಿಸರ ಸಂರಕ್ಷಣೆ, ಕೃಷಿ ಸೇರಿದಂತೆ ಪರಿಸರ ಪೂರಕ ಅಧ್ಯಯನಗಳಿಗೆ ಅನುಕೂಲವಾಗಲು ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಭೂಕುಸಿತ ಉಂಟಾಗದಂತೆ ಕ್ರಮಕೈಗೊಳ್ಳಲಾಗುವುದು. ಪುನರ್ವಸತಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.

 

 

ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ. ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಮನವಿ ಮಾಡಲಾಗಿದೆ. ಅರಣ್ಯ ವಾಸಿಗಳಿಗೆ ಜೀವನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ.ಅರಣ್ಯವಾಸಿಗಳು ತಲೆತಲಾಂತರದಿಂದ ಅಲ್ಲಿ ಜೀವನ ಮಾಡುತ್ತಿದ್ದಾರೆ. ಅದಕ್ಕಾಗಿ ಈಗ ಸರ್ಕಾರ ಮೂರು ತಲೆಮಾರುಗಳ ಬದಲು ಒಂದು ತಲೆಮಾರಿನ ಬಗ್ಗೆ ಮಾಹಿತಿ ಪಡೆದು ಹಕ್ಕುಪತ್ರ ನೀಡಲು ಚಿಂತನೆ ನಡೆಸಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಸುಪ್ರೀಂ ಕೋರ್ಟಿಗೆ ತಿಳಿಸಲಾಗಿದೆ ಸುಪ್ರಿಂಕೋರ್ಟ್ ನಿರ್ಣಯ ಬರುವವರೆಗೂ ಅತಿಕ್ರಮಣದಾರರಿಗೆ ಯಾವುದೇ ತೊಂದರೆ ನೀಡದಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಎಂದು ತಿಳಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ ಹೆಬ್ಬಾರ, ಕೋಟ ಶ್ರೀನಿವಾಸ ಪೂಜಾರಿ, ಸಿ.ಸಿ.ಪಾಟೀಲ ಮೊದಲಾದವರಿದ್ದರು.


Jana Jeevala
the authorJana Jeevala

Leave a Reply