This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

7 ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅನುಮೋದನೆ CM Bommai approved the formation of 7th Pay Commission


ಬೆಂಗಳೂರು :
7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಆಯೋಗ ರಚನೆ ಮಾಡಲಾಗಿದೆ. ಅದು ಆರು ತಿಂಗಳ ಒಳಗಾಗಿ ಶಿಫಾರಸುಗಳನ್ನು ಮಾಡಲಿದೆ.
ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ (ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡಲಿದೆ.
ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಇವೇ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಲಿದೆ.


Jana Jeevala
the authorJana Jeevala

Leave a Reply