ಬೆಳಗಾವಿ :
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂಬ ಹೋರಾಟ ಹಿನ್ನೆಲೆ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯದ ಮುಖಂಡರ ಬಳಿ ನನಗೆ ಇನ್ನೂ 10 ದಿನ ಸಮಯ ಕೊಡಿ.
ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸಹಮತ ವ್ಯಕ್ತಪಡಿಸದ ಮುಖಂಡರು ಮತ್ತೆ 10 ದಿನಗಳ ಗಡುವು ನೀಡಲು ಸಾಧ್ಯವಿಲ್ಲ . ಸಮುದಾಯವು ವೇದಿಕೆ ಮೇಲೆಯೇ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು ಎನ್ನಲಾಗಿದೆ.
ಪಂಚಮಸಾಲಿ ಲಿಂಗಾಯತ ಸಮುದಾಯದವರು ಮೀಸಲಾತಿ ಸಂಬಂಧ ಬೆಳಗಾವಿ ಸುವರ್ಣಸೌಧಕ್ಕೆ ಇಂದು ಬೃಹತ್ ಪ್ರಮಾಣದಲ್ಲಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಸ್ಪಷ್ಟ ಭರವಸೆ :
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಪಂಚಮಸಾಲಿ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ವಿಷಯ ತಿಳಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಸರ್ವ ಪಕ್ಷ ಸಭೆ ಕರೆದು ಗುರುವಾರದಂದು 2 ಎ ಮೀಸಲಾತಿ ಘೋಷಣೆ ಮಾಡುತ್ತೇವೆ ಎಂದು ದೇವರ ಸಾಕ್ಷಿಯಾಗಿ ಹೇಳಿದ್ದಾರೆ ಎಂದು ತಿಳಿಸಿದರು.