ಬೆಂಗಳೂರು :
ಕಳೆದ ವರ್ಷದ ಜುಲೈ 23,24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಸಲ್ಲಿಕೆಯಾಗಿರುತ್ತವೆ.
ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.