ಬೆಂಗಳೂರು:
ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಜೂನ್ 11ರ ಭಾನುವಾರ ಜಾರಿಯಾಗಲಿದ್ದು, ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿದ್ದರಾಮಯ್ಯ ಉಚಿತ ಬಸ್ ಟಿಕೆಟ್ ವಿತರಿಸಲಿದ್ದಾರೆ.
ಮೆಜೆಸ್ಟಿಕ್ ನಲ್ಲಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲಿರುವ ಸಿದ್ದರಾಮಯ್ಯ, ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ತೆರಳುವ ಮಾರ್ಗ ಸಂಖ್ಯೆ 43 ರ ಬಸ್ ನಲ್ಲಿ ಕಂಡಕ್ಟರ್ ಆಗಿ, ಟಿಕೆಟ್ ವಿತರಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.