ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ, ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ ಸಿದ್ದರಾಮಯ್ಯ, 2024ನೇ ಸಾಲಿನ ಪೂರ್ಣಾವ ಬಜೆಟ್ನಲ್ಲಿ ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮಯದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ., ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ್ದಾರೆ.
ಅಲ್ಲದೇ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್, ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿ ನಿಲಯಗಳನ್ನು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
ಪ್ರಮುಖ ಘೋಷಣೆಗಳು:
ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್ಎಫ್ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗಿದೆ.
ವಕ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗಿದೆ. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ.