ಬೆಳಗಾವಿ : ಜಿಲ್ಲಾ ಪಂಚಾಯತ್ ಅಧೀನದಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆರು ವರ್ಷಗಳಿಗಿಂತ ಅಧಿಕ ಸೇವೆ ಸಲ್ಲಿಸುತ್ತಿರುವ ಕರವಸೂಲಿಗಾರರ, ಕ್ಲರ್ಕ್/ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಡಿ.೩೧, ೨೦೨೨ ರಂದು ಪ್ರಕಟಿಸಲಾಗಿತ್ತು. ಪ್ರಕಟಿತ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಒಟ್ಟು ೭೮ ಆಕ್ಷೇಪಣೆಗಳು ಸ್ವೀಕೃತವಾಗಿವೆ.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಂಬಂಧ ಪಟ್ಟ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಿದ ಗ್ರಾಮ ಪಂಚಾಯತ್ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರಗಳೊಂದಿಗೆ ಮಾ. ೬ ರಂದು ಮುಂಜಾನೆ ೯ ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳು ನಿರ್ದೆಶನ ನೀಡಿರುತ್ತಾರೆ.
ಸದರಿ ದಿನದಂದು ದಾಖಲಾತಿಗಳ ಪರಿಶೀಲನೆಗೆ ಹಾಜರಾಗದೇ ಗೈರು ಹಾಜರ ಉಳಿದ ಸಿಬ್ಬಂದಿಗಳ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಸೂಚನೇ ನೀಡಿದ್ದು, ದಾಖಲಾತಿಗಳ ಪರಿಶೀಲನೆಗೆ ತಪ್ಪು ಮಾಹಿತಿ ಒದಿಗಿಸಿದ್ದಲ್ಲಿ ಅಂತಹ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.