ಅಥಣಿ:
ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸವದಿಯವರಿಗೆ ಮಂಗಳವಾರ ತಾಲೂಕಿನ ಜನವಾಡ ಗ್ರಾಮದಲ್ಲಿ ಅಭಿನಂದನೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಿ, ಸನ್ಮಾನಿಸಿ ಅಭಿನಂದಿಸಿದ ಗ್ರಾಮಸ್ಥರೆಲ್ಲರಿಗೆ ಲಕ್ಷ್ಮಣ ಸವದಿ ಅವರು ಕೃತಜ್ಞತೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮದ ಗುರುಹಿರಿಯರು, ಪಕ್ಷದ ಕಾರ್ಯಕರ್ತರು, ಮಾತೆಯರು , ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.