ಬೆಂಗಳೂರು :
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರಿ ದೂರು ಸಲ್ಲಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಅವರು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸರಿಗೆ ಗುರುವಾರ ದೂರು ಸಲ್ಲಿಸಿದರು.