ಬೆಂಗಳೂರು:
ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರು ಎಡೆಬಿಡದೆ ಸಭೆ ನಡೆಸಿದ್ದಾರೆ. ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ಸಮಿತಿ ಕರ್ನಾಟಕ ಚುನಾವಣೆ ಸಂಬಂಧ ಸಭೆ ನಡೆಸಿದೆ.
ಕರ್ನಾಟಕ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇದೀಗ ಗೆಲ್ಲಲು ಬೇಕಾಗಿರುವ ರಣತಂತ್ರಗಳನ್ನು ಹೆಣೆಯುತ್ತಿದೆ. ಮಹತ್ವಕಾಂಕ್ಷಿಯ ಅಭ್ಯರ್ಥಿಗಳ ಪಟ್ಟಿಯನ್ನು ಇಷ್ಟರಲ್ಲೇ ಬಿಡುಗಡೆ ಮಾಡಲಿದೆ.
ಕಾಂಗ್ರೆಸ್ ಎರಡನೇ ಪಟ್ಟಿ ಮಂಗಳವಾರ ರಾತ್ರಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಬಿಡುಗಡೆ ಆಗದ ಕಾರಣ ಬುಧವಾರ ಬಿಡುಗಡೆ ಆಗುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಿಇಸಿ ಸಭೆ ಬಳಿಕ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಮೊದಲು ಪ್ರಕಟಿಸಿದ್ದೇ ಕಾಂಗ್ರೆಸ್ . ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ. ನೀತಿ ಸಂಹಿತೆ ಜಾರಿಗೂ ಮುನ್ನವೇ 120 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದವು. ಆಡಳಿತ ಪಕ್ಷಕ್ಕೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದವು. ಮಂಗಳವಾರ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಆದರೆ, ಬುಧವಾರ ಬಿಡುಗಡೆ ಸಾಧ್ಯತೆ ಇದೆ.