ಬೆಳಗಾವಿ:
ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000, ಡಿಪ್ಲೋಮೋ ಪದವೀಧರರಿಗೆ ಒಂದುವರೆ ಸಾವಿರ ರೂಪಾಯಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ನಗರದ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದರು.
ವಿಧಾನಸಭೆ ಚುನಾವಣೆ ಹೊತ್ತಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಸಮಾವೇಶ ನಡೆಸುತ್ತಿದ್ದು, ಕಾಂಗ್ರೆಸ್ 4 ನೇ ಗ್ಯಾರಂಟಿ ಘೋಷಿಸಿದೆ.
ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶ ನಡೆಸುತ್ತಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಯುವ ಕ್ರಾಂತಿ ಸಮಾವೇಶ ಆಯೋಜನೆಗೊಂಡಿದ್ದು, ಇದನ್ನು ರಾಹುಲ್ ಗಾಂಧಿ ಉದ್ಘಾಟಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುವ ಕ್ರಾಂತಿ ಸಮಾವೇಶಕ್ಕಾಗಿ ಬೆಳಗಾವಿ ನಗರದ ಸಿಪಿ ಇಡ್ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವಿಶೇಷವಿಮಾನದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಕಮಲ ಕೆಸರಿನಲ್ಲಿದ್ರೆ ಚೆಂದ, ತೆನೆ ಹೊಲದಲ್ಲಿದ್ರೆ ಚೆಂದ : ಡಿ.ಕೆ ಶಿವಕುಮಾರ್
ಕಮಲ ಕೆಸರಿನಲ್ಲಿದ್ರೆ ಚೆಂದ, ತೆನೆ ಹೊಲದಲ್ಲಿದ್ರೆ ಚೆಂದ, ಧಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು ಎಂದು ಹೇಳುವ ಮೂಲಕ ಡಿ.ಕೆ ಶಿವಕುಮಾರ್ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕಿ ಗೆಲ್ಲಿಸಿ ಎಂದರು.
ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಐದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಬಿಜೆಪಿಯನ್ನು ಇಲ್ಲಿಂದ ಓಡಿಸಲು ನಾವು ಈಗ ಯಾತ್ರೆ ಆರಂಭಿಸಿದ್ದೇವೆ, ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.