ಬೆಳಗಾವಿ :
ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಗ್ರಾಹಕ ಸಂರಕ್ಷಣಾ ಕಾಯ್ದೆ ಪರಿಧಿಗೆ ಒಳಪಡುವ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ವಿಜಯಕುಮಾರ ಇವರೊಂದಿಗೆ ಸಂವಾದ ನಡಿಸಿರುವ ಬಗ್ಗೆ ದೂರದರ್ಶನ ಚಂದನವಾಹಿನಿಯಲ್ಲಿ ಜುಲೈ. 2 ರಂದು ಸಂಜೆ 6 ಗಂಟೆಯಿಂದ 6:30 ರವರೆಗೆ ಪ್ರಸಾರ ಮಾಡಲಾಗುತ್ತಿದ್ದು, ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.