ಬೆಂಗಳೂರು:
2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶವನ್ನು ಶುಕ್ರವಾರ ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.
ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನು https://karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.