ಬೆಂಗಳೂರು; ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಡಿ.1ರಿಂದ ರಾಜ್ಯದ ಬಹು ತೇಕ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಡಿ.1ಕ್ಕೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.