ಮಂಗಳೂರು: ಫೈಂಜಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ಜಿಲ್ಲಾಧಿಕಾರಿ ಮು ಮುಗಿಲನ್ ರಜೆ ಘೋಷಿಸಿದ್ದಾರೆ.
ಡಿಸೆಂಬರ್ 3 ರಂದು
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಹವಾಮಾನ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 3 ರಂದು (ಮಂಗಳವಾರ)ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕಾಲೇಜುಗಳಿಗೆ ರಜೆ:
ಫೈಂಜಲ್ ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಮದರಸಗಳಿಗೂ ರಜೆ ಅನ್ವಯವಾಗುತ್ತದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.