ಬೆಳಗಾವಿ: ರಾಜ್ಯದ ಅತ್ಯಂತ ಪ್ರತಿಷ್ಠಿತ ಎನಿಸಿಕೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯಲಿದೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 16 ನಿರ್ದೇಶಕರ ಪೈಕಿ ಈಗಾಗಲೇ 9 ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇನ್ನುಳಿದ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ರಾಜ್ಯದ ಪ್ರಭಾವಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಮತ್ತು ಚಿಕ್ಕೋಡಿಯ ಮಾಜಿ ಸಂಸದ ರಮೇಶ್ ಕತ್ತಿ ಅವರ ಬಣಗಳ ನಡುವಿನ ಈ ಸೆಣಸಾಟ ಭಾರಿ ಕುತೂಹಲ ಕೆರಳಿಸಿದೆ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ರಮೇಶ್ ಕತ್ತಿ ಅವರನ್ನು ಸೋಲಿಸಲೇಬೇಕು ಎಂದು ಎದುರಾಳಿ ಗುಂಪು ಪಣ ತೊಟ್ಟಿದೆ. ಹೀಗಾಗಿ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.