ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ.
ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಖಾನಾಪುರ ತಾಲೂಕಿನಿಂದ ಕಣಕ್ಕಿಳಿಯಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳೆ ನಿರ್ಧರಿಸಿದ್ದರು. ಆದರೆ ಇದೀಗ ಅವರು ಕಣದಿಂದ ಹಿಂದಕ್ಕೆ ಸರಿಯಲಿದ್ದಾರೆ. ಈ ಬಗ್ಗೆ ನಾನು ಮತ್ತು ಅವರು ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.
ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ಚುನಾವಣೆಯ ಕಣಕ್ಕಿಳಿಯಲು ಕಳೆದ ಮೂರು- ನಾಲ್ಕು ತಿಂಗಳಿನಿಂದ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ ಜಿಲ್ಲೆಯ ಹಿತದೃಷ್ಟಿಯಿಂದ ಇದೀಗ ಅವರು ಕಣಕ್ಕೆ ಇಳಿಯದೇ ಇರಲು ತೀರ್ಮಾನಿಸಲಾಗಿದ್ದು ಈ ಬೆಳವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.