ಬೆಳಗಾವಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಮೂರು ಹಂತದಲ್ಲಿ ಆಯೋಜಿಸುತ್ತಿದ್ದು, ಪ್ರಥಮ ಹಂತದಲ್ಲಿ ಪರೀಕ್ಷೆ-1ನ್ನು ರಾಜ್ಯಾದ್ಯಂತ ನಾಳೆಯಿಂದ ಎಪ್ರೀಲ್ 4 ರವರೆಗೆ ಆಯೋಜಿಸಲಾಗುತ್ತಿದೆ. ಹಾಗಾಗಿ ಡಿಡಿಪಿಐ ನಿಲಾವತಿ ಹಿರೇಮಠ ಅವರು ಪರಿಶೀಲನೆ ನಡೆಸಿದರು.
ಬೆಳಗಾವಿ ತಾಲೂಕಿನ ವಿವಿಧ ಪರೀಕ್ಷ ಕೇಂದ್ರಕ್ಕೆ ತೆರಳಿದರ ಅವರು, ಆಸನಗಳು, ಸಿಸಿಟಿವಿ, ಭದ್ರತೆ ಸೇರಿದಂತೆ ಅಗತ್ಯ ಸಿದ್ದತೆಯನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ 97 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 130 ಒಟ್ಟು 227 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷೆಗೆ ಬೆಳಗಾವಿ ಜಿಲ್ಲೆಯ 34863 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 47511 ಒಟ್ಟು 82374 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುರಕ್ಷಿತವಾಗಿ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ ಪರೀಕ್ಷೆಗಳ ಸುತ್ತಲಿನ 200 ಮೀಟರ ಪ್ರದೇಶವನ್ನು ಅಹಿತಕರ ಘಟನೆ ನಡೆಯದಂತೆ ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಿ, ಪರೀಕ್ಷಾ ಕೇಂದ್ರದ ಸುತ್ತಲಿನ ನಿಷೇಧಿತ ಪ್ರದೇಶದಲ್ಲಿರುವ ಝರಾಕ್ಷ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಸೂಕ್ಷ್ಮ 10 ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಂದ 227 ಪರೀಕ್ಷಾ ಕೇಂದ್ರಗಳಲ್ಲಿನ ಎಲ್ಲಾ ಕೊಠಡಿಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ವೆಬ್ ಕಾಸ್ಟಿಂಗ್ (Live Streaming) ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಹಂತದ ವೀಕ್ಷಣೆಗೆ 17 ಅಧಿಕಾರಿಗಳನ್ನು ನೇಮಿಸಿ ತರಬೇತಿ ನೀಡಲಾಗಿದೆ. ತಾಲೂಕಾ ಹಂತದ ತಾಂತ್ರಿಕ ಸಮಸ್ಯೆ ನಿವಾರಣೆಗೆ 22 ತಾಂತ್ರಿಕ ಸಹಾಯಕರನ್ನು ನೇಮಿಸಲಾಗಿದೆ. ಪರೀಕ್ಷೆಗಳು ಸುಗಮವಾಗಿ ನಡೆಯುವ ದೃಷ್ಟಿಯಿಂದ ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖಾ ಅಧಿಕಾರಿಗಳನ್ನೊಳಗೊಂಡ 04 ಜಿಲ್ಲಾ ತಂಡಗಳು ಹಾಗೂ ಪ್ರತಿ ವಲಯದಿಂದ 03 ತಂಡಗಳಂತೆ ಒಟ್ಟು 21 ವಿಚಕ್ಷಣಾ ತಂಡವನ್ನು ರಚಿಸಲಾಗಿದೆ.