ಬೆಂಗಳೂರು :
ಬಿಜೆಪಿ ತೊರೆದಿರುವ ಮಾಜಿ ಶಾಸಕ ಯು.ಬಿ. ಬಣಕಾರ ನವೆಂಬರ್ 21ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಚುನಾವಣೆ ಸನಿಹ ಬರುತ್ತಿದ್ದಂತೆಯೇ ಬಿಜೆಪಿ ತೊರೆದ ಶಾಕ್ ನೀಡಿದ್ದ ಯು. ಬಿ.ಬಣಕಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಯು.ಬಿ. ಬಣಕಾರ ಅವರನ್ನು ಸಚಿವ ಬಿ.ಸಿ. ಪಾಟೀಲ ವಿರುದ್ಧ ಹಿರೇಕೆರೂರಿನಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ.
ಯು.ಬಿ ಬಣಕಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ , ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.