ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಜುಲೈ 25 ಮತ್ತು 26ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ತಂಪು ಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಮತ್ತು ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.
ಭಾರಿ ಮಳೆ: ಗುರುವಾರ (ಜುಲೈ 25) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಗುರುವಾರ (ಜುಲೈ 25) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಎಲ್ಲಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 25) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜೂನ್ 24ರ ಮಧ್ಯಾಹ್ನದಿಂದ ಜುಲೈ 26ರ ಬೆಳಿಗ್ಗೆ 8:30 ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ಆರೇಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-ಕಾಲೇಜುಗಳು ರಜೆ ಇರಲಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರರು ರಜೆ ಘೋಷಣೆ ಮಾಡಿದ್ದಾರೆ.