ಹೊನ್ನಾವರ :
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ರಾಮತೀರ್ಥ ಬಳಿ ಹೆಲಿಪಾಡ್ ಗೆ ಮೈಸೂರಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಂತೆ ಹೆಲಿಪಾಡಿಗೆ ಸಿಗ್ನಲ್ ಕೊಡುವ smoke candle ನಿಂದ ಹುಲ್ಲಿಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಮಾಡಲಾಗಿತ್ತು. ಸಭೆಗೆ ಡಿಕೆಶಿ ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.